ವಿಜಯಪುರ: ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭವು ಜ.9ರಂದು ನಗರದ ವಿ.ಬಿ ದರ್ಬಾರ ಮೈದಾನದ ಆವರಣದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 11:45ಕ್ಕೆ ನಡೆಯುವ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನೆರವೇರಿಸಲಿದ್ದಾರೆ.

ಉಪ ಮುಖ್ಯಮಂತ್ರಿಗಳಾದ ಹಾಗೂ ಜಲ ಸಂಪನ್ಮೂಲ ಸಚಿವರು ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರಾದ
ಡಿ. ಕೆ. ಶಿವಕುಮಾರ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರುಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ. ಬಿ. ಪಾಟೀಲ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ. ನಗರದ ಶಾಸಕರಾದ ಬಸನಗೌಡ ಆರ್. ಪಾಟೀಲ (ಯತ್ನಾಳ) ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ, ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ,ಇಂಧನ ಸಚಿವರಾದ ಕೆ.ಜೆ. ಜಾರ್ಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ ಗುಂಡೂರಾವ್, ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ, ಕಂದಾಯ ಸಚಿವರಾದ ಕೃಷ್ಣಬೈರೆಗೌಡ, ವಸತಿ, ವಕ್ಸ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಬಿ. ಝಡ್ ಜಮೀರ್ ಅಹ್ಮದಖಾನ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ ಎಸ್. ತಂಗಡಗಿ, ನಗರಾಭಿವೃದ್ಧಿ ಮತ್ತು ನಗರ ಯೋಜನೆ (ಕೆಯುಡಬ್ಲ್ಯೂಎಸ್ ಡಿಬಿ/ಕೆಯುಐಡಿಎಫ್‌ಸಿ) ಸಚಿವರಾದ ಸುರೇಶ.ಬಿ.ಎಸ್ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್‌ನ ಅಧ್ಯಕ್ಷರೂ ಆದ ಶಾಸಕರಾದ
ಅಪ್ಪಾಜಿ ಸಿ.ಎಸ್. ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ ಸೇರಿದಂತೆ ಇತರ ಪ್ರತಿಷ್ಠಿತ ರಾಜಕೀಯ ಮುಖಂಡರು
ಉಪಸ್ಥಿತರಿರಲಿದ್ದಾರೆ.








